Menu

ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್‌ಐ ಅಮಾನತು

ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೂ ಜನಪ್ರತಿನಿಧಿಯೇ ಬರಬೇಕಾಯಿತು ಎಂಬ ಸ್ಥಳೀಯರ ಆಕ್ರೋಶ ಹಿನ್ನೆಲೆ ಐಜಿಪಿ ಈ ಕ್ರಮ ಕೈಗೊಂಡಿದ್ದಾರೆ.

ಗುತ್ತಲ ಠಾಣೆಯ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ ಆದೇಶ ಮಾಡಿದ್ದಾರೆ. ಮೂರು ದಿನಗಳ ಹಿಂದೆ ಕಾಮಗಾರಿಗಳ ಉದ್ಘಾಟನೆಗಾಗಿ ಗುತ್ತಲ ಪಟ್ಟಣಕ್ಕೆ ಭೇಟಿ ನೀಡಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿ ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ತಾವೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಸ್ಥಳೀಯ ಲಮಾಣಿ ಅವರಿಗೆ ಪ್ರಾಥಮಿಕ ಶಾಲೆ ಸಮೀಪದ ಕೊಠಡಿಯೊಂದರಲ್ಲಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ದೂರು ನೀಡಿದ್ದರು. ಕೂಡಲೇ ಸ್ಥಳಕ್ಕೆ ರುದ್ರಪ್ಪ ಲಮಾಣಿ ಭೇಟಿ ನೀಡಿದಾಗ ವ್ಯಕ್ತಿ ಮಟ್ಕಾ ಬರೆಯುತ್ತಿರುವುದು ಕಂಡುಬಂದಿತ್ತು. ಅವರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪಿಎಸ್​ಐಗೆ ಆರೋಪಿಯನ್ನು ಒಪ್ಪಿಸಿದ್ದರು. ಉಪಸಭಾಪತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಟ್ಕಾ ದಂಧೆಗೆ ಕಡಿವಾಣ ಹಾಕುವಂತೆ ತಹಶೀಲ್ದಾರ್​​ ಮತ್ತು ಪೊಲೀಸ್​​ ಸಿಬ್ಬಂದಿಗೆ ಲಮಾಣಿ ಸೂಚಿಸಿದ್ದರು. ಎಚ್ಚೆತ್ತ ಪೊಲೀಸ್​​ ಇಲಾಖೆ ಘಟನೆಗೆ ಸಂಬಂಧಿಸಿದಂತೆ ಗುತ್ತಲ ಠಾಣೆಯ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಲಾಗಿದೆ.

Related Posts

Leave a Reply

Your email address will not be published. Required fields are marked *