Friday, September 18, 2026
Menu

ಅರಸೀಕೆರೆಯಲ್ಲಿ ವಿಷಯುಕ್ತ ಮೇವು ತಿಂದು ಕುರಿಗಳ ಸಾವು

ಅರಸೀಕೆರೆ ತಾಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ.  ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಕುರಿಗಳು ಹೊಲಗಳ ತುಂಬೆಲ್ಲಾ ಸತ್ತು ಬಿದ್ದಿವೆ. ಮೆಕ್ಕೆಜೋಳದ ಚಿಗುರು ತಿಂದು ಕುರಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಕುರಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಹಾಸನದಿಂದ ಮೂವರು ಪಶು ವೈದ್ಯರ ತಂಡ ಸ್ಥಳಕ್ಕೆ ತೆರಳಿದೆ. ಈ ಕುರಿಗಳು ಶಿರಾ ಮೂಲದ ರಾಜಣ್ಣ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಕುರಿಗಳನ್ನು ಕಳೆದುಕೊಂಡ ಅವರು ಕಂಗಾಲಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *