Menu

ಕರ್ನಾಟಕ ಬಜೆಟ್ 2026: 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2026–27ನೇ ಸಾಲಿನ ರಾಜ್ಯದ ಬಜೆಟ್‌ ಮಂಡಿಸಿದ್ದು,  ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ ಮಾಡಲಾಗಿದೆ.

ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂಪಾಯಿ ಪ್ರಕಟಿಸಲಾಗಿದೆ. 8 ರಿಂದ 12ನೇ ತರಗತಿ ಮಕ್ಕಳಿಗೆ AI ಕಲಿಕೆಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

56 ಸಾವಿರ ಉದ್ಯೋಗ ಭರ್ತಿ ಮಾಡುವುದಾಗಿ  ಎಂದು  ಬಜೆಟ್‌ನಲಿ ತಿಳಿಸಿದ್ದು,  ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯಲ್ಲಿ ರೋಪ್​ ವೇ ನಿರ್ಮಾಣ ಪ್ರಕಟಿಸಿದರು.

ಬಜೆಟ್’ನಲ್ಲಿ ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.

ರಾಜ್ಯದಲ್ಲಿ ಈಗಿರುವ ಪೊಲೀಸ್​ ಠಾಣೆಗಳ ಜೊತೆಗೆ ಮತ್ತೆ 12 ಹೊಸ ಪೊಲೀಸ್​ ಠಾಣೆಯನ್ನು ಬಜೆಟ್ ಘೋಷಣೆ ಮಾಡಲಾಗಿದೆ. ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ, 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ, ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ, ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ, ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.

Related Posts

Leave a Reply

Your email address will not be published. Required fields are marked *