ಕರ್ನಾಟಕ ಬಜೆಟ್ 2026 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಆಯಾ ಇಲಾಖೆಗಳಿಗೆ ಬಜೆಟ್ನಲ್ಲಿ ಮೊತ್ತ ನಿಗದಿಗೊಳಿಸಲಾಗಿದೆ. ಶಿಕ್ಷಣ: 47,224 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ., ಇಂಧನ: 29,947 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ., ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ., ನೀರಾವರಿ: 22,436 ಕೋಟಿ ರೂ., ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ., ಕಂದಾಯ: 19,843 ಕೋಟಿ ರೂ., ಸಮಾಜ ಕಲ್ಯಾಣ: 18,612 ಕೋಟಿ ರೂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ., ಒಳಾಡಳಿತ (ಗೃಹ): 11,424 ಕೋಟಿ ರೂ., ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ., ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ., ಪಶು ಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ., ಇತರ ವಲಯಗಳಿಗೆ 1,72,757 ಕೋಟಿ ರೂ. ಮೀಸಲಿಡಲಾಗಿದೆ.


