Menu

ವಾಣಿಜ್ಯ ಬಳಕೆ ಸಿಲಿಂಡರ್‌ ಬಿಕ್ಕಟ್ಟು: ಬೆಂಗಳೂರು ಹೋಟೆಲ್‌ಗಳಿಗೆ ನೆರವಾಗಲು ಸಿಎಂ ಕೇಂದ್ರಕ್ಕೆ ಮನವಿ

ಇರಾನ್-ಇಸ್ರೇಲ್ ಯುದ್ಧ ಪರಿಣಾಮ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಿದೆ. ಇದರಿಂದ ಬೆಂಗಳೂರಿನಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೊರಡಿಸಿದ ಆದೇಶ ಪ್ರಕಾರ ಗೃಹ ಬಳಕೆ ಎಲ್‌ಪಿಜಿ ಗೆ ಆದ್ಯತೆ ನೀಡಲಾಗುತ್ತಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ತೀವ್ರ ತೊಡಕಾಗಿದೆ. ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ಬೆಂಗಳೂರಿನ ಹಲವು ಹೋಟೆಲ್ ಮತ್ತು ರೆಸ್ಟೋರೆಂಟ್​​ಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಪಡೆಯಲು ಆಗದಿದ್ದರೆ ಹಲವು ಹೋಟೆಲ್‌ಗಳು ತಾತ್ಕಾಲಿಕವಾಗಿ ಬಂದ್‌ ಆಗುವ ಪರಿಸ್ಥಿತಿ ಎದುರಾಗಬಹುದು. ಬೆಂಗಳೂರು ನಗರದಲ್ಲಿ ಸಾವಿರಾರು ಸಣ್ಣ ಹೋಟೆಲ್‌ಗಳು, ಮೆಸ್ಸುಗಳು ಮತ್ತು ಕೇಟರಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಲಕ್ಷಾಂತರ ಜನ ಇವನ್ನು ಅವಲಂಬಿಸಿದ್ದಾರೆ. ಅವಲಂಬಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಹೋಟೆಲ್ ಹಾಗೂ ಕೇಟರಿಂಗ್ ಉದ್ಯಮಕ್ಕೆ ಅಗತ್ಯವಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಸಿಎಂ ವಿನಂತಿಸಿದ್ದಾರೆ.

ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ ಸಿಲಿಂಡರ್ ಗೆ 115ರೂ. ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ, ಆದರೆ ಎಲ್‌ಪಿಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Related Posts

Leave a Reply

Your email address will not be published. Required fields are marked *