Menu

ಇರಾನ್‌-ಇಸ್ರೇಲ್‌ ಸಂಘರ್ಷ: ಹರ್ಮುಜ್‌ ಜಲಸಂಧಿಯಲ್ಲಿ ಭಾರತದ ತೈಲ ಟ್ಯಾಂಕರ್‌ಗಳಿಗೆ ಇರಾನ್‌ ಅನುಮತಿ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್‌ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಜೊತೆ ಮಾತುಕತೆ ನಡೆಸಿದ ಬಳಿಕ ಇರಾನ್ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಹರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿ ಸಿಕ್ಕಿದೆ. ಇದರಿಂದ ಭಾರತಕ್ಕೆ ತೈಲ ಪೂರೈಕೆಯ ಸಮಸ್ಯೆಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಗಲಿದೆ.

ಇರಾನ್‌-ಇಸ್ರೇಲ್‌ ಸಂಘರ್ಷ ಆರಂಭಗೊಂಡ ಬಳಿಕ ಅಮೆರಿಕದ ಕಾರ್ಯಾಚರಣೆಯಿಂದಾಗಿ ಯುದ್ಧ ತೀವ್ರತೆ ಪಡೆದುಕೊಂಡು, ಇರಾನ್‌ ಕೂಡ ಪ್ರತಿದಾಳಿ ನಡೆಸುವುದರೊಂದಿಗೆ ಮಧ್ಯಪ್ರಾಚ್ಯ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಿವೆ. ಪರಿಣಾಮವಾಗಿ ಜಾಗತಿಕವಾಗಿ ಎಲ್‌ಪಿಜಿ ಬಿಕ್ಕಟ್ಟು ತಲೆದೋರಿದ್ದು, ಭಾರತಕ್ಕೂ ಬಾಧಿಸಿದೆ.

ಯುನೈಟೆಡ್ ಸ್ಟೇಟ್ಸ್, ಯುರೋಪ್ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳನ್ನು ಗುರಿಯಾಗಿಸಿ ಇರಾನ್‌ ತೈಲ ಟ್ಯಾಂಕರ್​ಗಳ ಮೇಲೆ ದಾಳಿ ನಡೆಸಿದೆ. ಭಾರತೀಯ ಧ್ವಜ ಹೊತ್ತ ಪುಷ್ಪಕ್ ಮತ್ತು ಪರಿಮಳ ಹಡಗುಗಳು ಜಲಸಂಧಿಯ ಮೂಲಕ ಸುರಕ್ಷಿತವಾಗಿ ಹಾದುಹೋಗಲು ಇರಾನ್ ಅನುಮತಿಸಿದೆ. ಹರ್ಮುಜ್ ಜಲಸಂಧಿ ಭಾರತದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಪ್ರಮುಖ ಜಲಮಾರ್ಗವಾಗಿದೆ.

 

Related Posts

Leave a Reply

Your email address will not be published. Required fields are marked *