Menu

ಎಲ್‌ಪಿಜಿ ಸಿಲಿಂಡರ್‌ ಕಳ್ಳರ ಬಂಧನ

ಮನೆ ಮುಂದೆ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಸರಬರಾಜು ವಾಹನದಲ್ಲಿದ್ದ ಸಿಲಿಂಡರ್ ಕದ್ದು ಪರಾರಿಯಾಗಿದ್ದ ಇಬ್ಬರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ನಾಯಕ್ (19), ಗೋವಿಂದರಾಜು (20) ಬಂಧಿತ ಆರೋಪಿಗಳು.

ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಗ್ಯಾಸ್ ಸರಬರಾಜು ವಾಹನದಿಂದ ಎಂಟು ಸಿಲಿಂಡರ್ ಕದ್ದು ಖದೀಮರು ಪರಾರಿಯಾಗಿದ್ದರು. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಗ್ಯಾಸ್ ಸಿಲಿಂಡರ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆದಿದ್ದಾರೆ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಗಾಂಜಾ ಸೇವಿಸಿ ತೂರಾಡುತ್ತಿದ್ದವರ ಬಂಧನ

ಗಾಂಜಾ ಸೇವಿಸಿ ಗೋಕರ್ಣ ಕಡಲ ತೀರದಲ್ಲಿ ತೂರಾಡುತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ಪವನ್ (28) ಹಾಗೂ ರಾಘು ಸೆಲ್ವರಂಗನ್ (30) ಬಂಧಿತರು. ಗೋಕರ್ಣದ ರುದ್ರಪಾದದ ಕರಿಯಪ್ಪನ ಕಟ್ಟೆ ಸಮೀಪದ ಬ್ಲೂ ಪೀನ್ ಬೀಚ್ ಸ್ಟೇಟ್ ರೆಸಾರ್ಟ್ ಎದುರಿನ ಸಮುದ್ರ ತೀರದಲ್ಲಿ ನಶೆಯಲ್ಲಿ ಓಲಾಡುತ್ತಿದ್ದರು. .ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರೂ ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *