ಹಣಕ್ಕಾಗಿ 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ಪ್ರಕರಣವೊಂದು ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಹಿರಂಗಗೊಂಡಿದೆ. ತಾಯಿ ಮತ್ತು ಮಲತಂದೆ, ಇನ್ನೊಬ್ಬ ಮಹಿಳೆಯನ್ನುಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ ಕೃತ್ಯ ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಮತ್ತು ಆಕೆಯ ಮಲತಂದೆ, ಇನ್ನೊಬ್ಬ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಆರೋಪಿ ವಾಣಿ ಎಂಬಾಕೆಯ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಗ್ರಾಹಕರ ಕಿರುಕುಳಕ್ಕೆ ಒಳಗಾಗುತ್ತಿದ್ದಳು.
ಗ್ರಾಹಕರಿಂದ ವಾಣಿ 6 ರಿಂದ 10 ಸಾವಿರ ರೂಪಾಯಿ ಹಣ ಪಡೆದುಕೊಂಡು ಅರ್ಧದಷ್ಟು ಹಣವನ್ನುಬಾಲಕಿಯ ತಾಯಿಗೆ ನೀಡುತ್ತಿದ್ದಳು ಎಂದು ತಿಳಿದು ಬಂದಿದೆ. ಪೊಲೀಸರು ಸಂತ್ರಸ್ತ ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.


