Menu

ಪ್ರಶ್ನೆಗಳಿಗೆ ಸಚಿವರಿಂದ ಸಿಗದ ಉತ್ತರಗಳು: ಸದನ ಮೊಟಕುಗೊಳಿಸಿ ಹೋದ ಸ್ಪೀಕರ್‌ ಖಾದರ್‌

ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲವೆಂದು ಅಸಮಾಧಾನಗೊಂಡ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿದ್ದಾರೆ.

ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸುವುದಿಲ್ಲ ಎಂದು ಹೇಳಿ ಕಲಾಪ ಮೊಟಕುಗೊಳಿಸಿದ್ದಾರೆ. 230 ಲಿಖಿತ ಪ್ರಶ್ನೆಗಳಲ್ಲಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ. ಸದನದಲ್ಲಿ ಸಚಿವ ಪರಮೇಶ್ವರ್ ಉತ್ತರ ಮಂಡಿಸುತ್ತಿದ್ದ ವೇಳೆ ಪ್ರತಿಪಕ್ಷ ಸದಸ್ಯರು ಟೀಕಿ ವ್ಯಕ್ತಪಡಿಸಿದ್ದಾರೆ.

ಕಲಾಪ ಆರಂಭದಿಂದಲೂ ಸಚಿವರಿಂದ ನಿರೀಕ್ಷಿತ ಉತ್ತರ ಬಂದಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ‌ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ಹೊರ ಹಾಕಿದ್ದಾರೆ. ಸಚಿವರ ವಿರುದ್ಧ ಸ್ಪೀಕರ್ ಖಾದರ್​ ಅಸಮಾಧಾನ ವ್ಯಕ್ತಪಡಿಸಿ, ಸದನದಲ್ಲಿ ಎಲ್ಲಾ ಶಾಸಕರೂ ಪ್ರಶ್ನೆ ಕೇಳುತ್ತಾರೆ. ಗಮನ ಸೆಳೆಯುವ ಸೂಚನೆಗೂ ಸಚಿವರು ಉತ್ತರ ಕೊಡುತ್ತಿಲ್ಲ. ಮೂರು ಸಲ ಸಚಿವರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ಸದನ ನಡೆಸುವುದಿಲ್ಲ ಎಂದು ಆಡಳಿತ ಪಕ್ಷಕ್ಕೆ ಸ್ಪೀಕರ್​​ ​ ಬಿಸಿ ಮುಟ್ಟಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಸಭಾತ್ಯಾಗ ಮಾಡಿದ್ದಾರೆ. ಪ್ರತಿದಿನವೂ ಶೇ. 10-30 ಲಿಖಿತ ಪ್ರಶ್ನೆಗಳಿಗೆ ಮಾತ್ರ ಉತ್ತರ ಕೊಡುತ್ತಿದ್ದಾರೆ. ಸರ್ಕಾರ ಸತ್ತಿದ್ದು, ಸಚಿವರು ಸದನಕ್ಕೆ ಬರುತ್ತಿಲ್ಲ. ಯಾರು ಸಿಎಂ ಎಂದು ನಿರ್ಧಾರ
ಆಗದಿರುವ ಕಾರಣ ಹೀಗೆಲ್ಲ ಆಗುತತಿದೆ. ಸ್ಪೀಕರ್ ಬೇಸತ್ತು ಹೊರ ಹೋಗಿರುವುದು ಸರ್ಕಾರಕ್ಕೆ ಚಾಟಿ ಏಟು ನೀಡಿದಂತಾಗಿದೆ. ಸ್ಪೀಕರ್ ನಡೆಯನ್ನು ಸ್ವಾಗತಿಸುತ್ತೇವೆ. ಸರ್ಕಾರ ಬದುಕಿದ್ದರೆ ಮುಖ್ಯಮಂತ್ರಿ ಬಂದು ಕ್ಷಮೆ ಕೇಳಬೇಕು. ಮಾನ, ಮಾರ್ಯಾದೆ ಇದ್ದರೆ ಸಚಿವರು ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಆರ್‌ ಅಶೋಕ ಕುಟುಕಿದ್ದಾರೆ.

ವಿಧಾನಸಭೆ ಇತಿಹಾಸದಲ್ಲಿಯೇ ಸರ್ಕಾರದ ಧೋರಣೆ ಖಂಡಿಸಿ ಸ್ಪೀಕರ್ ಪೀಠ ಬಿಟ್ಟು ಹೊರ ಹೋಗಿದ್ದಾರೆ. ಇದು ಆಘಾತಕಾರಿ, ಸಿಎಂ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. 40 ದಿನದ ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರವೇ ಬರುವುದಿಲ್ಲ. ಸ್ಪೀಕರ್ ತೆಗೆದುಕೊಂಡಿರುವ ನಿರ್ಣಯಕ್ಕೆ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕ ಸುನಿಲ್​​ ಕುಮಾರ್​​ ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *