Menu

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 110.44 ಅಡಿಗೆ ಕುಸಿತ

ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಇಂದು 110.44 ಅಡಿಗೆ ಕುಸಿದಿದೆ. ಜೂನ್, ಜುಲೈ ತಿಂಗಳಿನವರೆಗೆ ಕುಡಿಯುವ ನೀರಿಗೆ ಯಾವ ಅಭಾವ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

124.80 ಗರಿಷ್ಠ ಅಡಿ ಮಟ್ಟದ ಕೆಆರ್‌ಎಸ್ ಡ್ಯಾಂನಲ್ಲಿ 110.44 ಅಡಿ 32.167 ಟಿಎಂಸಿಯಷ್ಟು ನೀರಿದ್ದು, ಮುಂದಿನ ಜೂನ್, ಜುಲೈ ತಿಂಗಳಿನವರೆಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಈ ವರ್ಷ ಕಳೆದ ವರ್ಷ ಉತ್ತಮ ಮಳೆಯಾಗಿರುವುದರಿಂದ ಕೆಆರ್‌ಎಸ್ ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಿತ್ತು. ಹಲವು ತಿಂಗಳು ಗರಿಷ್ಠ ಮಟ್ಟವನ್ನೇ ಕಾಯ್ದುಕೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕುಡಿಯುವ ನೀರಿನ ಜೊತೆಗೆ ಮಂಡ್ಯ ಜಿಲ್ಲೆಯ ರೈತರ ಬೇಸಿಗೆ ಬೆಳೆಗಳಿಗೂ ನೀರನ್ನು ಕಟ್ಟು ಪದ್ಧತಿಯಲ್ಲಿ ಪೂರೈಸಲಾಗುತ್ತಿದೆ. ಈ ವರ್ಷ ಮೈಸೂರು, ಮಂಡ್ಯ, ಬೆಂಗಳೂರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *