ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ ಏಳು ಗಂಟೆಯಷ್ಟೊತ್ತಿಗೆ ಅಗ್ನಿ ದುರಂತದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ ಮಾಡಲು ಪೊಲೀಸರು ಜೊತೆಗೂಡಿದ್ದಾರೆ. ಈ ದುರಂತ ನಡೆಯಲು ನಿಖರವಾದ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


