Menu

ಬಾಗಲಕೋಟೆ ಕಾಂಗ್ರೆಸ್‌ ಟಿಕೆಟ್‌ ಫೈನಲ್‌: ಸಿಎಂ ಸಂಧಾನ ಫಲಪ್ರದ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಕಗ್ಗಂಟು ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆಯಿಂದ ಪರಿಹಾರಗೊಂಡಿದೆ.

ಮಾಜಿ ಶಾಸಕ ಎಚ್.ವೈ. ಮೇಟಿ ಕುಟುಂಬದಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಕಾಂಗ್ರೆಸ್‌ಗೆ ಸವಾಲಾಗಿತ್ತು. ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಮಹತ್ವದ ಸಭೆ ನಡೆಸಿ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗಿದೆ.

ಮೇಟಿಯವರ ಮಗಳು ಮಹಾದೇವಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಬಹಿರಂಗ ಎಚ್ಚರಿಕೆ ನೀಡಿದ್ದರು. ಮಹಾದೇವಿ ಅವರ ಅಭಿಮಾನಿಗಳು ‘ಮಾರ್ಚ್ 20 ರಂದು ಮಹಾದೇವಿ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಪೋಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಸೃಷ್ಟಿಸಿತ್ತು.

ಸಿಎಂ ಸಿದ್ದರಾಮಯ್ಯ ಎಲ್ಲರನ್ನು ಬೆಂಗಳೂರಿಗೆ ಕರೆಸಿಕೊಂಡು ಮಹತ್ವದ ಸಭೆ ನಡೆಸಿ, ಮೇಟಿ ಕುಟುಂಬಕ್ಕೆ ನೀಡುತ್ತೇವೆ. ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ. ಇದಕ್ಕೆ ಮೇಟಿಯವರ ಮಕ್ಕಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಖಚಿತಗೊಂಡಿದೆ.

ಬಾಗಲಕೋಟೆಯಲ್ಲಿ ಮೇಟಿ ಕುಟುಂಬದವರು ಟಿಕೆಟ್ ಕೇಳುತ್ತಿದ್ದಾರೆ. ಮಲ್ಲಿಕಾರ್ಜುನ, ಉಮೇಶ್, ಮಹದೇವಿ ಟಿಕೆಟ್ ಕೇಳುತ್ತಿದ್ದಾರೆ. ಯಾರಿಗೆ ಟಿಕೆಟ್ ಕೊಟ್ರೂ ಒಟ್ಟಿಗೆ ಕೆಲಸ ಮಾಡಬೇಕು ಎಂದಿದ್ದೇನೆ. ಅದಕ್ಕೆ ಮಲ್ಲಿಕಾರ್ಜುನ, ಉಮೇಶ್, ಮಹದೇವಿ ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡಲಿದೆ. ರಣದೀಪ್​ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಬರುತ್ತಿದ್ದಾರೆ. ಒಂದು ತಂಡ ದಾವಣಗೆರೆ, ಬಾಗಲಕೋಟೆಗೆ ಹೋಗಿತ್ತು. ಆ ವರದಿ ಆಧರಿಸಿ ನಾನು, ಡಿಸಿಎಂ ಚರ್ಚೆ ಮಾಡಿ ಹೈಕಮಾಂಡ್​ಗೆ ವರದಿ ಕೊಡುತ್ತೇವೆ ಎಂದರು.

ಈ ವಿಚಾರದಲ್ಲಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಮಾತನಾಡಿದ್ದು, ನಾನು ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಬಗ್ಗೆ ಇನ್ನೂ ವರದಿ ಬಂದಿಲ್ಲ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚೆ ಆಗಿದೆ. ಮೇಟಿ ಕುಟುಂಬದ ಸದಸ್ಯರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ. ನಾನು ಮಂತ್ರಿಗಳ ಬಳಿ ಚರ್ಚೆ ಮಾಡಿದ್ದೇನೆ, ವರದಿ ಕೊಡುತ್ತೇನೆ. ಬಳಿಕ ಹೈಕಮಾಂಡ್ ತೀರ್ಮಾನ ಮಾಡುವುದು ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *