Menu

ಶಿವಮೊಗ್ಗ ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಡಾಕ್ಟರ್‌ ಬಲಿ

ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ  ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟವರು.

ಡಾ. ಸಮೀಕ್ಷಾ  ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ  ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ.

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಅವರು ಅಸು ನೀಗಿದ್ದಾರೆ.

Related Posts

Leave a Reply

Your email address will not be published. Required fields are marked *