Menu

ಅರಸೀಕೆರೆಯಲ್ಲಿ ಜೂಜು ಅಡ್ಡೆಗೆ ಪೊಲೀಸ್‌ ದಾಳಿ: ತಪ್ಪಿಸಿಕೊಳ್ಳುವಾಗ ಬಿದ್ದು ವ್ಯಕ್ತಿ ಸಾವು

ಹಾಸನದ ಅರಸೀಕೆರೆಯ ಅರೆಕೆರೆ ಗ್ರಾಮದಲ್ಲಿ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

ಪ್ರವೀಣ್ (34) ಮೃತಪಟ್ಟ ವ್ಯಕ್ತಿ. ಯುಗಾದಿ ಹಬ್ಬದ ಸಂಭ್ರಮದಲ್ಲಿ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ ಗುಂಪು ಜೂಜಾಡುತ್ತಿದ್ದ ವಿಷಯ ತಿಳಿದು ಜಾವಗಲ್ ಪೊಲೀಸರು ದಾಳಿ‌ ಮಾಡಿದ್ದಾರೆ. ಈ ವೇಳೆ ಸ್ಥಳದಿಂದ‌ ತಪ್ಪಿಸಿಕೊಳ್ಳಲು‌ ಯುವಕರು ಓಡಿದ್ದಾರೆ. ಪ್ರವೀಣ್ ಓಡುವ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ.

ಲಾರಿ ಹರಿದು ನಾಲ್ಕು ವರ್ಷದ ಮಗು ಸಾವು

ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು ನಾಲ್ಕು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. ನಿಶಿಕಾ (4) ಮೃತ ಬಾಲಕಿ.

ಯುಗಾದಿ ಹಬ್ಬದಂದು ತಾಯಿ-ಮಗಳು ದೇವರ ದರ್ಶನಕ್ಕೆಂದು ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದುಹೋಗುತ್ತಿದ್ದಾಗ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದು ಸ್ಥಳದಲ್ಲೇ ಅಸು ನೀಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *