125 ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನವು ಟೇಕಾಫ್ ಕೆಲವೇ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಮೃತಪಟ್ಟಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.
ನಗರ ಕೇಂದ್ರದಿಂದ ಮೂರು ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ. ಅಧಿಕಾರಿಗಳು ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ವಿಮಾನದಲ್ಲಿದ್ದ 40 ಕ್ಕೂ ಹೆಚ್ಚು ಜನರ ಸ್ಥಿತಿ ಗತಿ ಙೇನಾಗಿದೆ ಎಂಬ ಮಾಹಿತಿ ಇನ್ನೂ ಲಭಿಸಿಲ್ಲ ಎಂದು ತಿಳಿಸಿದ್ದಾರೆ.


