Menu

ಬೆಂಗಳೂರಿನಿಂದ ತಿರುಪತಿ ದರ್ಶನಕ್ಕೆ ಹೊರಟಿದ್ದ ದಂಪತಿ, ಮಗು ಅಪಘಾತಕ್ಕೆ ಬಲಿ

ಬೆಂಗಳೂರು ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ.

ಬೆಂಗಳೂರಿನ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟು ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು. ಬಸ್‌ನ ಹಿಂಭಾಗಕ್ಕೆ ಸಿಲುಕಿಕೊಂಡಿದ್ದ ಕಾರನ್ನು ಪೊಲೀಸರು ಜೆಸಿಬಿ ಮೂಲಕ ಹೊರತೆಗೆದಿದ್ದಾರೆ.
ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ ಶನಿವಾರ ಮಧ್ಯಾಹ್ನ 12 ಗಂಟೆಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಟಿಕೆಟ್‌ ಪಡೆದುಕೊಂಡಿತ್ತು.

Related Posts

Leave a Reply

Your email address will not be published. Required fields are marked *