ಬಿಹಾರದ ನಳಂದ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು.
ನಳಂದ ಬಿಹಾರ ಶರೀಫ್‌ನಿಂದ 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಚೈತ್ರ ಮಾಸದ ಕೊನೆಯ ಮಂಗಳವಾರ ಈ ದೇವಾಲಯದಲ್ಲಿ ಹೆಚ್ಚಿನ ಭಕ್ತರ ದಟ್ಟಣೆಯಿತ್ತು. ಹೀಗಾಗಿ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನಷೇ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.
ಬ್ಯಾರಿಕೇಡ್ ಗಳು ಮುರಿದ್ದು, ಒಬ್ಬರ ಮೇಲೆ ಒಬ್ಬರಂತೆ ಭಕ್ತರು ಕೆಳಗೆ ಬಿದ್ದಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಅಲ್ಲಿ ಯಾವುದೇ ಪೊಲೀಸರು ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದು: ಖ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಹಾರ ಮೇಲ್ವಿಚಾರಣೆ ನಡೆಸುತ್ತಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.


