Thursday, January 30, 2025
Menu

ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದ ನಂದಿನಿ ನೌಕರರು

ಬಾಕಿ ವೇತನ ಬಿಡುಗಡೆ ಸೇರಿ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸಲು ಒಂದು ವಾರ ಕಾಲಾವಕಾಶ ನೀಡಿದೆ .ಬೇಡಿಕೆಗಳನ್ನು ಈಡೇರದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ತಿಳಿಸಿದೆ.

7ನೇ ವೇತನ ಆಯೋಗದ ಶಿಫಾರಸಿನಂತೆ ನೀಡಬೇಕಿರುವ ಬಾಕಿ ಉಳಿದಿರುವ ವೇತನ ಶೀಘ್ರವೇ ಮಂಜೂರು ಮಾಡಬೇಕೆಂದು ಕೆಎಂಎಫ್ ನೌಕರರ ಸಂಘದ ಅಧ್ಯಕ್ಷ ಗೋವಿಂದಗೌಡ ಆಗ್ರಹಿಸಿದ್ದಾರೆ. 7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರನ ಶೇ 25 ರ ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಈ ಪೈಕಿ ಶೇ 17 ರಷ್ಟು ಮಾತ್ರ ಹೆಚ್ಚಳ ಮಾಡಿದೆ. ಶೇ 8 ರಷ್ಟು ವೇತನ ಹೆಚ್ಚಳ, ಬಿಡುಗಡೆ ಬಾಕಿ ಇದೆ. ಅವುಗಳನ್ನು ಈಡೇರಿಸಬೇಕು ಎಂದು ಗೋವಿಂದಗೌಡ ಹೇಳಿದ್ದಾರೆ.

ವೇತನ ಬಾಕಿಯ ಮೊತ್ತದ ಬಿಡುಗಡೆ ಮಾಡಲು ಸರ್ಕಾರವು ಇನ್ನೂ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಭಾವಿಸಿದೆ ಎಂದು ಕೆಎಂಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಎಂಎಫ್ ದಿನಕ್ಕೆ 1 ಲಕ್ಷ ಲೀಟರ್ ಹಾಲನ್ನು ಗ್ರಾಹಕರಿಗೆ ಪೂರೈಸುತ್ತಿದ್ದು, 15 ಒಕ್ಕೂಟಗಳ ಮೂಲಕ ಹಾಲು ಸಂಗ್ರಹಿಸುತ್ತಿದೆ. ಸಂಘವು ರಾಜ್ಯಾದ್ಯಂತ 7,000 ಉದ್ಯೋಗಿಗಳನ್ನು ಒಳಗೊಂಡಿದೆ, ಅವರಲ್ಲಿ 1,400 ಉನ್ನತ ದರ್ಜೆಯ ಸಿಬ್ಬಂದಿ ಇದ್ದಾರೆ. ಇದರ ಆಧಾರದಲ್ಲಿ ಲೆಕ್ಕಹಾಕಿದರೆ, ವೇತನ ಹೆಚ್ಚಳ ಜಾರಿಗೆ ಬಂದರೆ ಅದಕ್ಕಾಗಿ ಸರ್ಕಾರ ತಿಂಗಳಿಗೆ 3 ಕೋಟಿ ರೂ. ವ್ಯಯಿಸಬೇಕಾಗುತ್ತದೆ.

Related Posts

Leave a Reply

Your email address will not be published. Required fields are marked *