Menu

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮತ್ತು ಮಗಳು ಅಂಕಿತಾ ಹೊಸಕೋಟೆಯಲ್ಲಿ ವಾಸವಾಗಿದ್ದರು. ಜಾತ್ರೆಗೆ ತೆರಳಿದ್ದ ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಲಾರಿ ಒವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಲ್ಟಿಯಾಗಿದೆ. ಬಾಲಕಿ ಮೃತಪಟ್ಟಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *