Menu

ಲವ್‌, ಸೆಕ್ಸ್‌ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ.  ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿದ್ದಾರೆ.

ಆರೋಪಿಇನ್‌ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ ಪರಿಚಯ ಮಾಡಿಕೊಂಡಿದ್ದ. ಸ್ನೇಹದಿಂದ ಶುರುವಾದ ಮಾತುಕತೆ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಈಶ್ವರಸಿಂಗ್, ಆಕೆಯನ್ನು ನಾನಾ ಕಡೆ ಕರೆದೊಯ್ದು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಯುವತಿ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಲು ಆರಂಭಿಸಿದಾಗ ಆರೋಪಿ ಮದುವೆಯಾಗಬೇಕಾದರೆ ಮೂರು ಕೋಟಿ ರೂಪಾಯಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಬಡ ಯುವತಿಗೆ ಅಷ್ಟು ದೊಡ್ಡ ಮೊತ್ತವನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ ಈ ಬೇಡಿಕೆ ಇಟ್ಟಿದ್ದ. ಹಣ ನೀಡದಿದ್ದರೆ ಮದುವೆಯಾಗುವುದಿಲ್ಲ ಎಂದು ಬೆದರಿಕೆ ಹಾಕಿದಾಗ ವಂಚನೆಗೆ ಒಳಗಾಗಿರುವುದು ಯುವತಿಗೆ ಗೊತ್ತಾಗಿ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರು ತನಿಖೆ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿ ಅತ್ಯಾಚಾರ, ವಂಚನೆ ಮತ್ತು ಬೆದರಿಕೆ ಹಾಕಿದ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *