Menu

ಕೊಲೆ ಆರೋಪಿ ಕಮಲಾಕರ್‌ ಭಟ್‌ಗೆ ಪೋಕ್ಸೊ ಸಂಕಷ್ಟ

ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ  ವ್ಯಕ್ತಿಯ  ಕೊಲೆ ಪ್ರಕರಣದ ಆರೋಪಿಯಾಗಿರುವ  ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್‌ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

ಕಮಲಾಕರ್‌ ಭಟ್‌ನನ್ನು ತುಂಗಾ ನಗರ ಠಾಣೆ ಪೊಲೀಸರು ಶಿವಮೊಗ್ಗ ಕೋರ್ಟ್‌ಗೆ ಹಾಜರುಪಡಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಈ ಸಂಬಂಧ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

​ಸಿದ್ದಾಪುರದ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಮಲಾಕರ್ ಭಟ್‌ನನ್ನು ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ​ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕಮಲಾಕರ ಬಾಲಕಿಯರೊಂದಿಗೆ ಮೈ  ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ  ಆರೋಪದಡಿ ಪೋಕ್ಸೊ ದೂರು ದಾಖಲಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಎರಡು ಮಕ್ಕಳ ತಾಯಿ ಆಗಿರುವ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ.

ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ ,ಕಮಲಾಕರ ಹಾಗೂ ಇತರರು ಸೇರಿ ಮೂವರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದರು. ಗುರೂಜಿ ಜೊತೆ ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾದೆ. ಈ ಕೊಲೆ ಪ್ರಕರಣಕ್ಕೆ ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಮಲಾಕರ್ ಭಟ್ ಅವರನ್ನು ಹತ್ತು ನಿಮಿಷ ವಶಕ್ಕೆ ನೀಡುವಂತೆ ಆಗ್ರಹಿಸಿದ್ದರು.

Related Posts

Leave a Reply

Your email address will not be published. Required fields are marked *