Menu

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ: ಆಳ್ವಾಸ್‌ನ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ

2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ದಾಖಲೆಯ ಹೆಚ್ಚಳವಾಗಿದೆ. ವಾಣಿಜ್ಯ‌ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ 600ಕ್ಕೆ 598 ಅಂಕ ತೆಗೆದ ಕೊಟ್ಟೂರಿನ ಅರ್ಚನಾ ಮತ್ತು ದಿಶಾ ಪ್ರಥಮ ಸ್ಥಾನದಲ್ಲಿದ್ದಾರೆ.

ಕಳೆದ ವರ್ಷಕ್ಕಿಂತ ಶೇ. 12ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವರ್ಷ ಪರೀಕ್ಷೆ ಬರೆದ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು.

ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಅಧಿಕೃತ ವೆಬ್‌ಸೈಟ್‌ https://karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಫಲಿತಾಂಶ ಪಡೆಯಬಹುದು. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.

Related Posts

Leave a Reply

Your email address will not be published. Required fields are marked *