Menu

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು

ಉಪನ್ಯಾಸಕಿ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸುಭಾಷನಗರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಸುಭಾಷನಗರ ನಿವಾಸಿ ಎಸ್. ಗೌತಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಪೋಷಕರು ನಂಬಿದ್ದರು.

ಇತ್ತೀಚೆಗೆ ಗೌತಮಿಯ ಕೊಠಡಿ ಸ್ವಚ್ಛಗೊಳಿಸಲು ಮುಂದಾದಾಗ ತಾಯಿಗೆ ಡೆತ್ ನೋಟ್ ಸಿಕ್ಕಿದ್ದು, ಆಕೆ ಆತ್ಮಹತ್ಯೆ ಮಾಡಿಕೊಲ್ಳಲು ಕಾರಣ ಏನೆಂಬುದು ತಿಳಿದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರೀತಿಸುತ್ತಿದ್ದ ಹುಡುಗಿ ಮದುವೆಗೆ ನಿರಾಕರಣೆ: ಯುವಕ ಆತ್ಮಹತ್ಯೆ

ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾನು ಪ್ರೀತಿಸುತ್ತಿದ್ದ ಹುಡುಗಿ ಮದುವೆಗೆ ಒಪ್ಪದಿದ್ದಕ್ಕೆ ಮನನೊಂದ ಯುವಕ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಭಿಷೇಕ್(23) ಆತ್ಮಹತ್ಯೆ ಮಾಡಿಕೊಂಡವ. ಇತ್ತೀಚೆಗಷ್ಟೇ ಖಾಸಗಿ ಕಾಲೇಜಿನಲ್ಲಿ ಬಿಕಾಂ ಮುಗಿಸಿದ್ದ. ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಅಭಿಷೇಕ್, ಅದೇ ಕಾಲೇಜಿನಲ್ಲಿ ಓದುತ್ತಿದ್ದ ಹುಡುಗಿಯನ್ನು ಪ್ರೀತಿಸುತ್ತಿದ್ದ. ಇಬ್ಬರ ಪ್ರೀತಿ ವಿಷಯ ಯುವತಿಯ ಮನೆಯವರಿಗೆ ಗೊತ್ತಾಗಿತ್ತು. ಯುವತಿಯ ಪೋಷಕರು ಅಭಿಷೇಕ್ ಜತೆ ಮದುವೆಗೆ ನಿರಾಕರಿಸಿದ್ದಾರೆ. ಹೀಗಾಗಿ ಯುವತಿ ಅಭಿಷೇಕ್​ನಿಂದ ದೂರವಾಗುವ ಪ್ರಯತ್ನ ಮಾಡಿದ್ದಳು. ಇದರಿಂದ ಮನನೊಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Related Posts

Leave a Reply

Your email address will not be published. Required fields are marked *