Menu

ರಾಜಕೀಯ ನಾಯಕರೊಂದಿಗಿನ ಸಂಭಾಷಣೆ ರೆಕಾರ್ಡ್‌: ವಚನಾನಂದ ಶ್ರೀ ವಿರುದ್ಧ ಆರೋಪ

ಹರಿಹರ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀ ಪ್ರಮುಖ ರಾಜಕೀಯ ನಾಯಕರ ಜೊತೆಗಿನ ಸಂಭಾಷಣೆಗಳನ್ನು ರೆಕಾರ್ಡ್‌ ಮಾಡಿ ಇಟ್ಟುಕೊಳ್ಳುತ್ತಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಪಂಚಮಸಾಲಿ ಸಮಾಜ ಟ್ರಸ್ಟ್‌ ಸದಸ್ಯ ಎಚ್.ಎಸ್. ನಾಗರಾಜ್, ವಚನಾನಂದ ಶ್ರೀ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಚನಾನಂದ ಶ್ರೀ ರಾಜ್ಯದ ಹಿರಿಯ ಮತ್ತು ಪ್ರಮುಖ ರಾಜಕೀಯ ನಾಯಕರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿಕೊಂಡು ಅವುಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಅಭ್ಯಾಸ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದು ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿರುವ ನಾಯಕರಿಗೆ ತೀವ್ರ ಅಪಾಯಕಾರಿಯಾಗಿ \ ಪರಿಣಮಿಸಬಹುದುಎಂದು ನಾಗರಾಜ್ ಎಚ್ಚರಿಸಿದದ್ದು, ಯಾವುದೇ ನಾಯಕರು ಶ್ರೀಗಳೊಂದಿಗೆ ಫೋನ್‌ನಲ್ಲಿ ಮಾತನಾಡದಂತೆ ಮನವಿ ಮಾಡಿದ್ದಾರೆ.

ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡಿರುವ ನಡುವೆಯೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ. ಪಂಚಮಸಾಲಿಗಳು ಪ್ರಬಲರಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ವಚನಾನಂದ ಸ್ವಾಮೀಜಿ ಆರೋಪ ಮಾಡಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾಲಿ ನಾಯಕರು ಮತ್ತು ಸ್ವಾಮೀಜಿಗಳು ಗಟ್ಟಿಯಾಗುತ್ತಿದ್ದಾರೆ. ಈ ಕಾರಣಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಇರಬಹುದು, ಹಿಂದೆ ಸಿದ್ದಲಿಂಗ ಸ್ವಾಮೀಜಿ ಇರಬಹುದು, ಈಗ ನಮ್ಮನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ದೂರಿದ್ದಾರೆ.

ಉಚ್ಚಾಟನೆಗೊಳಿಸಿದ ಟ್ರಸ್ಟಿಗಳ ಬಗ್ಗೆ ಮಾತನಾಡಿ ಕೆಲವರಿಗೆ ನಾವು ಹಿಂದೂಗಳು ಎಂದು ಹೇಳಬಾರದು. ಕೆಲವರಿಗೆ ಲಿಂಗಾಯತ ಹಿಂದೂ ಎನ್ನಬಾರದು. ಪಂಚಮಸಾಲಿ ಮಠ 12 ಜನರ ಮಠ ಅಲ್ಲ. ಈ ನಿರ್ಧಾರದಿಂದ ನನಗೆ ಯಾವುದೇ ಆತಂಕ ಇಲ್ಲ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *