ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.
ಪ್ರಕರಣದ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಯೋಗೇಶ್ ಗೌಡರ ಮಕ್ಕಳಿಗೆ 16 ಲಕ್ಷ ರೂ. ಪರಿಹಾರವಾಗಿ ನೀಡಲು ನ್ಯಾಯಾಲಯವು ಸೂಚಿಸಿದೆ. ವಿನಯ್ ಕುಕರ್ಣಿ ಅವರನ್ನು ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಶಾಸಕ ಸ್ಥಾನದಿಂದ ವಜಾ ಮಾಡಲಾಗಿದೆ. ಪ್ರಕರಣದಲ್ಲಿ 21 ಆರೋಪಿಗಳಿದ್ದು, ಇಬ್ಬರು ಮಾಫಿ ಸಾಕ್ಷಿಯಾಗಿದ್ದಾರೆ. 19 ಆರೋಪಿಗಳು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಎ1 ಬಸವರಾಜ ಮುತ್ತಗಿ ಮಾಫಿ , ಎ17 ಶಿವಾನಂದ ಮಾಫಿ ಸಾಕ್ಷಿಗಳು. ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಬಿಡುಗಡೆಯಾಗಿದ್ದಾರೆ.
2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್ನಲ್ಲಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದಂತೆ 2019ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು.


