Menu

ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ: ಹರ್ಮುಜ್‌ ಜಲಸಂಧಿ ಮೇಲೆ ಮತ್ತೆ ಇರಾನ್‌ ನಿರ್ಬಂಧ

ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣ ಹರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಹೇಳಿದೆ. ಇರಾನ್ ನಿರ್ಣಾಯಕ ಜಲಮಾರ್ಗವಾಗಿರುವ ಹರ್ಮುಜ್ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದ್ದು, ತೆರೆಯುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ.

ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನ ಜಾರಿಯಲ್ಲಿರುವವರೆಗೆ ಗರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಾಗಾಟವನ್ನು ನಿರ್ಬಂಧಿಸುವುದಾಗಿ ಎಚ್ಚರಿಸಿದೆ.

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಉಗ್ರಗಾಮಿ ಗುಂಪಿನ ನಡುವೆ ಲೆಬನಾನ್‌ನಲ್ಲಿ 10 ದಿನಗಳ ಕದನ ವಿರಾಮದ ನಂತರ ಹರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ಸಂಪೂರ್ಣವಾಗಿ ತೆರೆಯಲಾಗಿದೆ ಎಂದು ಇರಾನ್ ಹೇಳಿತ್ತು. ಆದರೂ ಇರಾನ್​ನ ಹಡಗುಗಳ ಮೇಲಿನ ದಿಗ್ಬಂಧನ ಮುಂದುವರಿಯುತ್ತದೆ ಎಂದು ಟ್ರಂಪ್ ಹೇಳಿದ ಬಳಿಕ ಇರಾನ್ ಅಧಿಕಾರಿಗಳು ಈ ನಡೆಯು ಕಳೆದ ವಾರದ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ, ಹೀಗಾಗಿ ಹರ್ಮುಜ್ ಜಲಸಂಧಿಯನ್ನು ತೆರೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Related Posts

Leave a Reply

Your email address will not be published. Required fields are marked *