ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಾರು ಕೋಳಿಗಳು ಕೂಡ ಸತ್ತು ಹೋಗಿವೆ.
ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಈ ದುರಂತ ನಡೆದಿದೆ. ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಕೋಳಿ ತುಂಬಿಸಿಕೊಂಡು ಹೋಗುತ್ತಿದ್ದ ಗೂಡ್ಸ್ ಲಾರಿಯ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಹಿರೇಬಾಗೆವಾಡಿ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರಾದವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.


