Menu

ನೈಟಿ ಧರಿಸುತ್ತಾಳೆಂದು ಖಾನಾಪುರದಲ್ಲಿ ಪತ್ನಿಗೆ ಬೆಂಕಿ ಹಚ್ಚಿದ ಪತಿ

ನೈಟಿ ಧರಿಸುತ್ತಾಳೆ ಎಂಬ ಕಾರಣಕ್ಕೆ ಗಂಡನೊಬ್ಬ ಹೆಂಡತಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ್ದು, ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 80% ಸುಟ್ಟ ಗಾಯಗಳಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಯಿಂದ ಗೋವಾಗೆ ಶಿಫ್ಟ್ ಮಾಲಾಗಿದೆ.

ಮಂಜುಳಾ ಹಾಗೂ ಕೃಷ್ಣಾಜಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಹೆಂಡತಿ ಸೀರೆ ಬದಲು ನೈಟಿ, ಗೌನ್ ಹಾಕುತ್ತಿರುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು. ಅದೇ ಜಗಳ ಅತಿರೇಕಗೊಂಡು ಪತಿ ಪತ್ನಿಗೆ ಬೆಂಕಿ ಹಚ್ಚಿದ್ದಾನೆ. ಗಲಾಟೆ ಶಬ್ದ ಕೇಳಿ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *