Menu

ತಮಿಳುನಾಡು, ಪಶ್ಚಿಮಬಂಗಾಳ ವಿಧಾನಸಭೆಗಳಿಗೆ ಮತದಾನ ಇಂದು

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳು ಮತ್ತು ಪಶ್ಚಿಮ ಬಂಗಾಳದ 152 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

ತಮಿಳುನಾಡಿನಲ್ಲಿ ಈ ಬಾರಿ ಡಿಎಂಕೆ, ಎಐಡಿಎಂಕೆ ನಡುವೆ ಹಾಗೂ ದಳಪತಿ ವಿಜಯ್‌ ನೇತೃತ್ವದ ಟಿವಿಕೆ ನಡುವೆ ಬಿರುಸಿನ ಸ್ಪರ್ಧೆ ಇದೆ. 4,59,039 ಮಂದಿ ಮೊದಲ ಮತರಾರರಾಗಿದ್ದಾರೆ. 33,133 ಸ್ಥಳಗಳಲ್ಲಿ 75,064 ಮತಗಟ್ಟೆಗಳಿದ್ದು, 3 ಲಕ್ಷಕ್ಕೂ ಹೆಚ್ಚು ಚುನಾವಣಾ ಸಿಬ್ಬಂದಿ ನಿಯೋಜಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ 8,300 ಕ್ಕೂ ಹೆಚ್ಚು ಪೊಲೀಸ್‌ ಕರ್ತವ್ಯದಲ್ಲಿದ್ದಾರೆ.

5,049 ಮತಗಟ್ಟೆಗಳಲ್ಲಿ 3,025 ಮತಗಟ್ಟೆಗಳನ್ನು ಸೂಕ್ಷ್ಮ ಸ್ಥಳಗಳೆಂದು ಗುರುತಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್‌ ತಿಳಿಸಿದ್ದಾರೆ.
234 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಂ.ಕೆ ಸ್ಟಾಲಿನ್‌ 2ನೇ ಅವಧಿಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ 5 ವರ್ಷಗಳ ನಂತರ ಮತ್ತೆ ಅಧಿಕಾರ ನಿರೀಕ್ಷಿಸುತ್ತಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದ್ದು, ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. . ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳಿದ್ದಾರೆ.

8,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆ ತಂಡಗಳು ನಿಯೋಜನೆಗೊಂಡಿವೆ. ಮತದಾನಕ್ಕೂ ಮೊದಲೇ 199 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

Related Posts

Leave a Reply

Your email address will not be published. Required fields are marked *