ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ.
ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಎಂಬಾಕೆಗೆ ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಶೌಚಾಲಯಕ್ಕೆ ಹೋದಾಗ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ಕೂಡಲೇ ಕತ್ತು ಕೊಯ್ದು ಶೌಚಾಲಯದಲ್ಲೇ ಎಸೆದಿದ್ದಾಳೆ. ನಂತರ ಏನೂ ತಿಳಿಯದವಳಂತೆ ಶೌಚಾಲಯದಿಂದ ಹೊರಬಂದಿದ್ದಳು. ಅದೇ ಶೌಚಾಲಯಕ್ಕೆ ಹೋದ ಬೇರೊಬ್ಬ ಸಿಬ್ಬಂದಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಕಂಡುಉಳಿದವರಿಗೆ ಮಾಹಿತಿ ನೀಡಿದ್ದಾರೆ. ಕಂಪನಿಯ ಭದ್ರತಾ ಸಿಬ್ಬಂದಿ ಮತ್ತು ಮ್ಯಾನೇಜ್‌ಮೆಂಟ್ ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ವಿಶ್ವನಾಥಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದಾಗ, ರೇಣುಕಾ ಎಂಬಾಕೆಯೇ ಈ ಕೃತ್ಯ ಎಸಗಿದ್ದಾರೆ ಎಂಬುದು ದೃಢಪಟ್ಟಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾರಿವಾಳ ಕಳ್ಳತನ ವಿಚಾರಕ್ಕೆ ಜಗಳ: ಯುವಕನ ಕೊಲೆ
ಬೆಂಗಳೂರಿನ ರಾಜಗೋಪಾಲ ನಗರ ಠಾಣೆ ವ್ಯಾಪ್ತಿಯಲ್ಲಿ ಪಾರಿವಾಳ ಕಳ್ಳತನ ವಿಚಾರಕ್ಕೆ ಆರಂಭಗೊಂಡ ಜಗಳ ಯುವಕನ ಕೊಲೆಯಲ್ಲಿ ಕೊನೆಗೊಂಡಿದೆ. ಮಲ್ಲಿಕಾರ್ಜುನ್ ಹತ್ಯೆಯಾದ ಯುವಕ. ಮಲ್ಲಿಕಾರ್ಜುನ್, ಆರೋಪಿಗಳಾದ ಸೂರಿ, ದರ್ಶನ್ ಮತ್ತು ಮಹೇಂದ್ರ ಒಂದೇ ಏರಿಯಾದ ನಿವಾಸಿಗಳು. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಿಲ್ಲ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳಾದ ಸೂರಿ, ದರ್ಶನ್ ಮತ್ತು ಮಹೇಂದ್ರರನ್ನು ಬಂಧಿಸಿದ್ದಾರೆ. ಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಳಿ ಕೊಲೆಗೆ ಬಳಸಿದ ಚಾಕುವನ್ನೂ ವಶಪಡಿಸಿಕೊಳ್ಳಲಾಗಿದೆ.


