2025-26ನೇ ಸಾಲಿನ ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ದಾವಣಗೆರೆಯ ಭರತ್ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಚನ್ನಗಿರಿ ತಾಲೂಕಿನ ಕಣವೆಬಿಳಚಿಯ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಹಾಗೂ ಗಿರೀಶ್ರಾವ್- ಶಿಲ್ಪಾ ದಂಪತಿ ಪುತ್ರ ಭರತ್ ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ.
ಕೋಲಾರ ನಗರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಲಕ್ಷ್ಮೀ 625 ಕ್ಕೆ 624 ಅಂಕ ಗಳಿಸಿದ್ದು, ಕೋಲಾರ ಕೀಲುಕೋಟೆ ನಿವಾಸಿ ನಾಗರಾಜ್ ಅವರ ಪುತ್ರಿ. ಬೆಳಗಾವಿಯ ರೂಪಾ ಚನಗೌಡ ಪಾಟೀಲ, ಹಾಸನದ ಜಾನವಿ, ಹಾಸನದ ಉತ್ಸವ ಪಾಟೀಲ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.
https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯಲ್ಲಿ ಹೆಸರು, ನೋಂದಣಿ ಸಂಖ್ಯೆ, ತಂದೆಯ ಹೆಸರು ಇತ್ಯಾದಿ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ, ವಿದ್ಯಾರ್ಥಿಗಳು ಫಲಿತಾಂಶಗಳ ಮುದ್ರಣ ಪ್ರತಿಯನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.


