Menu

ಯೋಗೇಶ್ ಗೌಡ ಕೊಲೆ ಕೇಸ್‌: ಜೀವಾವಧಿ ಶಿಕ್ಷೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇಬ್ಬರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇರಿಸಲು ಮನವಿ ಮಾಡಿಕೊಂಡಿದ್ದಾರೆ. ಈ ಅರ್ಜಿ ಏ.27 ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ತೀರ್ಪು ಪ್ರಕಟವಾದ 90 ದಿನಗಳಲ್ಲಿ ತೀರ್ಪನ್ನು ಅಮಾನತಿನಲ್ಲಿ ಇಡದಿದ್ದಲ್ಲಿ ಶಾಸಕ ಸ್ಥಾನ ಅನರ್ಹಗೊಲ್ಳುವ ಆತಂಕದಿಂದ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದಾರೆ.

2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ವಿನಯ್ ಕುಲಕರ್ಣಿ ಸೇರಿ 21 ಮಂದಿ ವಿರುದ್ಧ ಆರೋಪ ಕೇಳಿ ಬಂದಿತ್ತು. ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. 10 ವರ್ಷಗಳ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಟಿಂಕರಿಕರ್ ಕೊಲೆ ಪ್ರಕರಣದಲ್ಲಿ ಭ್ರಷ್ಟಾಚಾರ ಎಸಗಿರುವ ಆರೋಪ ಸಾಬೀತಾಗಿದೆ. ಬಸವರಾಜ್ ಮುತ್ತಗಿಗೆ ಮಾಫಿ ಸಾಕ್ಷಿಯಾಗಿ ಬದಲಾಗಿದ್ದಾರೆ. ಮೃತ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶಿಸಿದೆ.

Related Posts

Leave a Reply

Your email address will not be published. Required fields are marked *