Menu

ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್‌ಐ ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಶಿವಮೊಗ್ಗದಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಕಳೆದ ಭಾನುವಾರ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆ ಮಾಡಿಕೊಂಡವರು.

ಮಂಜುಳಾ ಸಾವಿಗೆ ಪತಿಯ ಕಿರುಕುಳ ಕಾರಣ ಎಂದು ಕುಟುಂಬಸ್ಥರು ದೂರು ನೀಡಿದ್ದರು. ಆಕೆಯ ಪತಿ ಬಿಜೆಪಿ ಮುಖಂಡ ಹಾಗೂ ಸೊರಬ ಪುರಸಭೆ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಪ್ರಭು ಮಂಜುಳಾರನ್ನ ಎರಡನೇ ಮದುವೆಯಾಗಿ. ನಂತರವೂ ಮತ್ತೊಂದು ಮಹಿಳೆ ಜೊತೆ ಒಡನಾಟ ಹೊಂದಿದ್ದ ಎನ್ನಲಾಗಿದೆ. ಪತ್ನಿ ಮಂಜುಳಾಗೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸ್ನಾನಕ್ಕೆ ಹೋಗಿದ್‌ ವ್ಯಕ್ತಿ ನದಿಗೆ ಬಿದ್ದು ಸಾವು

ಹಾವೇರಿ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನ ಮಾಡಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಅಸು ನೀಗಿರುವ ಘಟನೆ ನಡೆದಿದೆ. ಅಬ್ಬಾಸ್ ನಾಸೂರ್ (52) ಮೃತಪಟ್ಟವರು.

ಅಬ್ಬಾಸ್ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿ. ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್ ಹೋಗಿದ್ವರು ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಈಜು ತಜ್ಞರು ಹುಡುಕಾಟ ನಡೆಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Posts

Leave a Reply

Your email address will not be published. Required fields are marked *