Menu

ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಸಾವು

ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಗೆ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ ಎಂಟು ಮಂದಿ  ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಕೆಲವರು ಫುಟ್‌ಪಾತ್‌ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಕೆಲವರು ಪಾದಚಾರಿಗಳು ಇರಬಹುದು ಎಂಬ ಅನುಮಾನವಿದೆ.  ಗೋಡೆ ಕುಸಿದ ತಕ್ಷಣ ಅಲ್ಲಿದ್ದ ಸಾರ್ವಜನಿಕರು ಕೆಲವರನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

ಹಳೆಯ ಗೋಡೆಗೆ ದೊಡ್ಡ ಟಾರ್ಪಲ್‌ ಹಾಕಿ ವ್ಯಾಪಾರ ಮಾಡುತ್ತಿದ್ದರು. ಮಳೆ ಜೋರಾಗಿ ಸುರಿದ ಕಾರಣ ರಕ್ಷಣೆಗೆ ವ್ಯಾಪಾರಿಗಳು ಮತ್ತು ಪಾದಚಾರಿಗಳು ಟಾರ್ಪಲ್‌ ಆಡಿ ನಿಂತಿದ್ದಾರೆ. ಆಗ ಬಿರುಗಾಳಿಸಹಿತ ಮಳೆಗೆ ಗೋಡೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಕಾರು ನಾಲೆಗೆ ಉರುಳಿ ತಾಯಿ ಮಗು ಸಾವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಕಾರೊಂದು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಪ್ರಿಯಾಂಕ (30) ಹಾಗೂ ವೈಭವ್ (ಒಂದುವರೆ ವರ್ಷ) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ದೇವನಹಳ್ಳಿ ನಿವಾಸಿಗಳು. ಧರ್ಮಸ್ಥಳಕ್ಕೆ ಭೇಟಿ ನೀಡಿ ವಾಪಸ್ ದೇವನಹಳ್ಳಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರು ನಾಲೆಗೆ ಪತನಗೊಂಡಿದೆ ಎನ್ನಲಾಗಿದೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು  ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *