ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ. ಕಾಂಗ್ರೆಸ್ನ ತಮಿಳುನಾಡು ಘಟಕವು ಚೆನ್ನೈನಲ್ಲಿ ಸಭೆ ಸೇರಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಜಾತ್ಯತೀತ ಸರ್ಕಾರಕ್ಕೆ ಜನಾದೇಶವಿದ್ದು, ಪಕ್ಷವು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ತಮಿಳಗ ವೆಟ್ರಿ ಕಳಗಂಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆಯಿದೆ. ಈ ವಿಚಾರದಲ್ಲಿ ಪಕ್ಷದ ಕೇಂದ್ರ ನಾಯಕತ್ವವು ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಘಟಕಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ವಿಜಯ್ ಅಧಿಕೃತವಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಬೇಕು. ನಂತರವೇ ಪ್ರಮಾಣ ವಚನ ಸ್ವೀಕರಿಸಬಹುದಾಗಿದೆ.
ವಿಜಯ್ ಅವರು ಬೆಂಬಲ ಕೋರಿ ಕಾಂಗ್ರೆಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ ಎಂದು ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್ ದೃಢಪಡಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷವು 108 ಸ್ಥಾನಗಳಿಸಿ ಅತಿದೊಡ್ಡ ಪಕ್ಷವಾ ಹೊರ ಹೊಮ್ಮಿದೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ 118 ಸ್ಥಾನಗಳ ಬಹುಮತ ಸಿಗದ್ದರಿಂದ ಮೈತ್ರಿ ಮಾತುಕತೆ ಅಗತ್ಯ ಆಗಿದೆ.


