ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು 50 ಬೈಕ್‌ಗಳ ಸಮೇತ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ನರಸಿಂಹಮೂರ್ತಿ ಮತ್ತು ಪ್ರಸಾದ್ ಬಂಧಿತರು. ಅವರಿಂದ 55 ಲಕ್ಷ ರೂಪಾಯಿ ಮೌಲ್ಯದ ನಾನಾ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಹಣ ಪಡೆಯುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್ ಕಳವು ಮಾಡಿದ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಈ ಬೈಕ್ ಕಳವು ಜಾಲ ಪತ್ತೆಯಾಗಿದೆ.
ಬಂಧಿತರು ಕೋಲಾರ, ಮಾಲೂರು, ಬಂಗಾರಪೇಟೆ, ಕೆ.ಆರ್. ಪುರ ಮತ್ತು ಕಾಡುಗೋಡಿ ಭಾಗಗಳಲ್ಲಿಯೂ ಬೈಕ ಕದಿಯುತ್ತಿದ್ದರು. ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಮದುವೆ ಮಂಟಪಕ್ಕೆ ನುಗ್ಗಿ ಚಿನ್ನ ಕಳವು
ಮದುವೆ ಮಂಟಪಕ್ಕೆ ನುಗ್ಗಿ ಕಳ್ಳ ವಧುವಿನ ಬಂಗಾರ ಮತ್ತು ಬೆಳ್ಳಿಯ ಆಭರಣಗಳಿದ್ದ ಬ್ಯಾಗ್ ಕಳವು ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬ್ಯಾಗ್ ಸಮೇತ ಕಳ್ಳ ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 40 ಗ್ರಾಂನ ಚಿನ್ನದ ಸರ, ಅರ್ಧ ಕೆ.ಜಿ. ಬೆಳ್ಳಿ, 10 ಸಾವಿರ ನಗದು ಮತ್ತು ಎರಡು ಮೊಬೈಲ್ ಫೋನ್ಗಳನ್ನುಕಳ್ಳ ದೋಚಿಕೊಂಡು ಹೋಗಿದ್ದಾನೆ.
ಕಳ್ಳತನ ನಡೆದಿರುವ ಬಗ್ಗೆ ವಿನೋದ ಎನ್ನುವರು ದೂರು ಕೊಟ್ಟರೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಒಂದೇ ಬಿಲ್‌ನಲ್ಲಿ ನಾಲ್ಕು ಐಟಂಗಳು ಇವೆ, ಎರಡು ಐಟಂ ಕಳ್ಳತನ ಆಗಿದೆ ಎಂದು ಹೇಳಿದ್ದೀರಿ. ಉಳಿದ ಎರಡು ಐಟಂ ತೆಗೆದುಕೊಂಡು ಬನ್ನಿ, ಆಮೇಲೆ ದೂರು ದಾಖಲಿಸಿಕೊಳ್ಳುತ್ತೇವೆಂದು ಪೊಲೀಸರು ಹೇಳಿದ್ದಾಗಿ ತಿಳಿಸಿದ್ದಾರೆ.


