Menu

ಪಡಿತರ ಅಕ್ಕಿ ಅಕ್ರಮ ಸಾಗಣೆ: ಮೂರು ಲಕ್ಷ ರೂ. ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಅರೆಸ್ಟ್‌

ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರು ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬವರಿಂದ ಮೂರು ಲಕ್ಷ ರೂ. ವಸೂಲಿ ಮಾಡಿದ ಆರೋಪದಡಿ ಮೋಕಾ ಪೊಲೀಸರಿಂದ ಬಂಧಿತರಾಗಿದ್ದಾರೆ.

ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಅಕ್ರಮ ಅಕ್ಕಿ ಸಾಗಣೆ ಲಾರಿಗಳನ್ನು ಅಡ್ಡಗಟ್ಟಿ ಐದು ಲಕ್ಷ ರೂ. ಬೇಡಿಕೆಯಿಟ್ಟು, ಮೂರು ಲಕ್ಷ ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಸಂಬಂಧ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಸೂಚನೆಯನ್ವಯ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರ ವಿಚಾರಣೆ ನಡೆಸಲಾಗಿದೆ.

ಮಡಕೇರಿಯಿಂದ ಆಂಧ್ರಪ್ರದೇಶದತ್ತ ಪಡಿತರ ಅಕ್ಕಿ ತುಂಬಿಕೊಂಡು ತೆರಳುತ್ತಿದ್ದ ಎರಡು ಲಾರಿಗಳನ್ನು ಅಡ್ಡಗಟ್ಟಿದ್ದ ಆರೋಪಿಗಳು, ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಎಂದು ಹೇಳಿ ಐದು ಲಕ್ಷ ರೂ. ಹಣ ಕೇಳಿದ್ದರು. ಮೂರು ಲಕ್ಷ ರೂ. ವಸೂಲಿ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಣ ನೀಡದಿದ್ದರೆ ಲಾರಿಗಳನ್ನು ಸೀಜ್ ಮಾಡಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿರುವುದಾಗಿ ಶರಭಯ್ಯ ಮೋಕಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಗನ್ ಮ್ಯಾನ್ ದೇವರಾಜ್ ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಹಣ ವಸೂಲಿ ಮಾಡಿರುವುದು ದೃಢಪಟ್ಟಿದೆ. ಎಸ್ಪಿ ಸುಮನ್ ಡಿ. ಪನ್ನೇಕರ್ ಅವರೇ ಕ್ರಮ ಕೈಗೊಂಡು ದೇವರಾಜ್ ಬಂಧನಕ್ಕೆ ಸೂಚನೆ ನೀಡಿದ್ದಾರೆ. ಮೋಕಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

Related Posts

Leave a Reply

Your email address will not be published. Required fields are marked *