Menu

ಜಿಬಿಎ ಚುನಾವಣೆ: ಜೂನ್‌ 24ರ ಒಳಗೆ ದಿನಾಂಕ ಘೋಷಣೆಗೆ ಇಸಿ ಸೂಚನೆ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಜೂನ್‌ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ನೇತೃತ್ವದಲ್ಲಿ ಸಭೆ ನಡೆಯಿತು. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭಾಗವಹಿಸಿದ್ದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದಾಗಿ ತಿಳಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆ ಸಮಾಲೋಚಿಸಿ ದಿನಾಂಕ ನಿಗದಿಗೊಳಿಸಬೇಕು ಎಂಬ ಕಾನೂನು ನಿಯಮವಿದೆ. ಹಾಗಾಗಿ ಸಭೆ ನಡೆಸಲಾಗಿದೆ. ಚುನಾವಣೆ ನಡೆಸಲು ಎಲ್ಲಾ ಕ್ರಮ ತೆಗೆದುಕೊಳ್ಳಲಾಗಿದೆ. ದಿನಾಂಕ ನಿಗದಿ ಬಾಕಿ ಎಂದು ಜಿಬಿಎ ಮಾಹಿತಿ ನೀಡಿದೆ. ಜೂನ್ -30 ರೊಳಗೆ ಚುನಾವಣೆ ದಿನಾಂಕ ನಿಗದಿ ಪಡಿಸಬೇಕು ಎಂದು ಸೂಚಿಸಲಾಗಿದೆ. ಸುಪ್ರೀಂಕೋರ್ಟ್ ಗೆ ಈ ಮಾಹಿತಿಯನ್ನು ನಾವು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *