ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ಆರೋಪಗಳ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ ಮೂರರಂದು ದೇಶಾದ್ಯಂತ ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅಧಿಕೃತವಾಗಿ ರದ್ದುಗೊಳಿಸಿದೆ. ಗಂಭೀರ ಆರೋಪಗಳ ಕಾರಣ ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಈ ನಿರ್ಧಾರ ಕೈಗೊಂಡು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರ್ಧರಿಸಲಾಗಿದೆ.
ರಾಜಸ್ಥಾನದ ಸೀಕರ್‌ನಲ್ಲಿ 140 ಪ್ರಶ್ನೆಗಳಿದ್ದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪತ್ತೆಯಾಗಿತ್ತು. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡ ಈಗಾಗಲೇ ತನಿಖೆ ನಡೆಸಿದೆ. ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯ ಕಾಪಾಡಲು ಕೇಂದ್ರ ಸರ್ಕಾರ ಸಂಪೂರ್ಣ ತನಿಖೆಯನ್ನು ಸಿಬಿಐಗೆ ವಹಿಸಿದೆ.
ಪರೀಕ್ಷೆಗಿಂತ ಮೊದಲೇ ‘ಗೆಸ್ ಪೇಪರ್’ ಹೇಗೆ ಸೋರಿಕೆ ಆಗಿದೆ, ಯಾವುದಾದರೂ ಸಂಘಟಿತ ಜಾಲವಿದೆಯೇ ಎಂಬ ಬಗ್ಗೆ ಸಿಬಿಐ ತನಿಖೆ ನಡೆಸಲಿದೆ. 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರದ್ದಾದ ಪರೀಕ್ಷೆಯನ್ನು ಮರು ನಿಗದಿಪಡಿಸಲಾಗುವುದು. ಹೊಸ ಪರೀಕ್ಷಾ ದಿನಾಂಕ ಮತ್ತು ಹೊಸ ಪ್ರವೇಶ ಪತ್ರಗಳ ಮಾಹಿತಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು
. ಮರು ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸುವ ಹಾಗೂ. ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಹಳೆಯ ದಾಖಲಾತಿಗಳು ಮತ್ತು ಆಯ್ದ ಪರೀಕ್ಷಾ ಕೇಂದ್ರಗಳು ಮಾನ್ಯವಾಗಿರುತ್ತವೆ. ಹೊಸ ಪರೀಕ್ಷಾ ದಿನಾಂಕ ಮತ್ತು ಹೊಸ ಪ್ರವೇಶ ಪತ್ರಗಳ ಬಗ್ಗೆ ಮಾಹಿತಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗುತ್ತದೆ. ಯಾವುದೇ ಗೊಂದಲಗಳಿದ್ದಲ್ಲಿ ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಇಮೇಲ್: neet-ug@nta.ac.in ದೂರವಾಣಿ: 011-40759000 / 011-69227700.


