Menu

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ ಹಾಕಬೇಡಿ: ಟಿವಿಕೆ ಪಕ್ಷ ಮನವಿ

ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಿಎಂ ವಿಜಯ್‌ ಅವರ ಟಿವಿಕೆ ಪಕ್ಷವು, ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಫುಟ್‌ಪಾತ್‌ಗಳಲ್ಲಿ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.

ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಈ ಸಂಬಂಧ ಹೇಳಿಕೆ ನೀಡಿದ್ದು, ರಾಜಕೀಯ ಆಚರಣೆಗಳು ಜನರ ಜೀವನಕ್ಕೆ ತೊಂದರೆ ಆಗಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ತಮ್ಮ ನಾಯಕರ ಹಾಗೂ ಗೆದ್ದ ಅಭ್ಯರ್ಥಿಗಳ ಪರವಾಗಿ ದೊಡ್ಡ ಪ್ರಮಾಣದಲ್ಲಿ ಬ್ಯಾನರ್‌ಗಳನ್ನು ಹಾಕುವ ಪದ್ಧತಿ ನಡೆದುಕೊಂಡು ಬರುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ.. ನಗರ ಪ್ರದೇಶಗಳ ರಸ್ತೆ ಬದಿಗಳಲ್ಲಿ, ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಹಾಗೂ ಜನರು ಹೆಚ್ಚಾಗಿ ಸಂಚರಿಸುವ ಪ್ರದೇಶಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

ರಾಜಕೀಯ ಕಾರ್ಯಕ್ರಮಗಳಷ್ಟೇ ಅಲ್ಲದೆ ಹುಟ್ಟುಹಬ್ಬ, ಕುಟುಂಬ ಸಮಾರಂಭ ಅಥವಾ ಖಾಸಗಿ ಆಚರಣೆಗಳ ಹೆಸರಲ್ಲಿಯೂ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕಬಾರದು ಎಂದು ಟಿವಿಕೆ ಮನವಿ ಮಾಡಿದೆ. ರಾಜಕೀಯ ನಾಯಕರ ಹುಟ್ಟುಹಬ್ಬದ ವೇಳೆ ನಗರದೆಲ್ಲೆಡೆ ಫ್ಲೆಕ್ಸ್‌ಗಳನ್ನು ಹಾಕುವುದು ಹೆಚ್ಚಾಗಿದೆ. ಜನರಿಗೆ ಕಿರಿಕಿರಿ ಉಂಟಾಗುತ್ತದೆ ಎಂದು ಟಿವಿಕೆ ಹೇಳಿದೆ.

ಫುಟ್‌ಪಾತ್‌ಗಳಲ್ಲಿ ಬ್ಯಾನರ್ ಹಾಕುವ ಪ್ರವೃತ್ತಿಯನ್ನೂ ತೀವ್ರವಾಗಿ ಖಂಡಿಸಿದ್ದು, ಪಾದಚಾರಿಗಳು ನಡೆಯಲು ಬೇಕಿರುವ ಫುಟ್‌ಪಾತ್‌ಗಳನ್ನು ರಾಜಕೀಯ ಅಥವಾ ಖಾಸಗಿ ಜಾಹೀರಾತುಗಳಿಗಾಗಿ ಬಳಸುವುದು ಸರಿಯಲ್ಲ ಎಂದು ಎನ್. ಆನಂದ್ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *