Menu

ಸೋನಿಯಾ ಗಾಂಧಿ ಮೇದಾಂತ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಸಣ್ಣ ಶಸ್ತ್ರಚಿಕಿತ್ಸೆಗಾಗಿ ಹರಿಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋನಿಯಾ ಗಾಂಧಿ ಕಳೆದೆರಡು ವರ್ಷದಿಂದ ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ದೆಹಲಿ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಆಸ್ಪತ್ರೆಯಲ್ಲಿ ತಾಯಿಯನ್ನು ನೋಡಿಕೊಂಡಿದ್ದರು.

ಜನವರಿ ತಿಂಗಳಲ್ಲಿ ಬ್ರೊಂಕೈಲ್ ಅಸ್ತಮಾ ಸಮಸ್ಯೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. 2025ರಲ್ಲಿ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಒಂದು ಬಾರಿ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲಿದ್ದ ಅವರು ದೆಹಲಿ ಹಾಗೂ ಶಿಮ್ಲಾದಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಪಡೆದಿದ್ದರು.

ಐದೂ ಬಾರಿ ಲೋಕಸಭಾ ಸಂಸದೆಯಾಗಿ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಆರೋಗ್ಯ ಹಾಗೂ ವಯಸ್ಸಿನ ಕಾರಣದಿಂದ ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ, ಬಳಿಕ ರಾಜ್ಯಸಭೆಗೆ ಆಯ್ಕೆ ಆಗಿದ್ದರು.

Related Posts

Leave a Reply

Your email address will not be published. Required fields are marked *