Menu

ಬಾಲಕರಿಗೆ ಲೈಂಗಿಕ ಕಿರುಕುಳ ದೂರು: ಪೊಲೀಸ್‌ ವಿಚಾರಣೆ, ಮೆಡಿಕಲ್‌ ಟೆಸ್ಟ್‌ಗೆ ಒಳಗಾದ ವಚನಾನಂದಶ್ರೀ

ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮಠದ ಸ್ವಾಮೀಜಿ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಅವರು ಹರಿಹರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾದರು. ಬಳಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ.

ಲಕ್ಷ್ಮೀಶ್ವರ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿತ್ತು. ಆ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಪೊಲೀಸರು ನೋಟಿಸ್ ನೀಡಿದ ಪ್ರಕಾರ ಸ್ವಾಮೀಜಿ ಠಾಣೆಗೆ ತೆರಳಿ ವಿಚಾರಣೆ ಎದುರಿಸಿದರು. ವಿಚಾರಣೆ ಬಳಿಕ ಅವರನ್ನು ಹರಿಹರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳನ್ನು ಮಸಾಜ್‌ಗೆ ಬಳಸಿಕೊಳ್ಳುತ್ತಿದ್ದ ಗಂಭೀರ ಆರೋಪ ಸ್ವಾಮೀಜಿಗಳ ಮೇಲಿದೆ. ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರು ಆಧರಿಸಿ ಪೋಕ್ಸೋ ಕಾಯಿದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದು, ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ.

ಕೆಲವರು ಈ ಆರೋಪಗಳು ಸುಳ್ಳು ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು, ಮಠದ ಸಿಬ್ಬಂದಿ ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸುವ ಕೆಲಸ ನಡೆಯುತ್ತಿದೆ. ಸ್ವಾಮೀಜಿಗಳ ವಿಚಾರಣೆ ಮತ್ತು ಮೆಡಿಕಲ್ ವರದಿ ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ನಿರ್ಧಾರವಾಗಲಿದೆ.

Related Posts

Leave a Reply

Your email address will not be published. Required fields are marked *