Menu

27 ಸಾವಿರ ಕೋಟಿ ರೂ. ವಂಚನೆ ಕೇಸ್‌: ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ದಾಳಿ

ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಅನಿಲ್ ಅಂಬಾನಿಯ ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಸಿಬಿಐ ಕಾರ್ಯಾಚರಣೆ ತೀವ್ರಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ 27,337 ಕೋಟಿ ರೂ. ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮಾಜಿ ಅಧಿಕಾರಿಗಳ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯುತ್ತಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್‌ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ, ಸಿಎಫ್‌ಒ ಮತ್ತು ನಿರ್ದೇಶಕರ ವಸತಿ ಆವರಣಗಳ ಮೇಲೆ ದಾಳಿ ನಡೆದಿದೆ.

ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ಸರ್ಚ್ ವಾರಂಟ್ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ.  ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳ ವಿರುದ್ಧ ಕಳೆದ ಕೆಲವು ತಿಂಗಳುಗಳಲ್ಲಿ ಏಳು ಪ್ರಕರಣಗಳು ದಾಖಲಾಗಿವೆ. ಬ್ಯಾಂಕ್​ಗಳು ಮತ್ತು ಎಲ್‌ಐಸಿ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

Related Posts

Leave a Reply

Your email address will not be published. Required fields are marked *