Menu

ಬಡವರ ಮತಗಳನ್ನು ಕಸಿಯಲು ಎಸ್ ಐಆರ್ ಮೂಲಕ ಸಂಚು: ಡಿಕೆ ಶಿವಕುಮಾರ್ ಕಿಡಿ

“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದದ ಡಿಸಿಎಂ, ಶಾಸಕರು, ಬಿಎಲ್ಎಗಳಿಗೆ ಎಸ್ ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಆದ ಕಾರಣಕ್ಕೆ ನಾವು ಜಾಗೃತಿಗೆ ಮುಂದಾಗಿದ್ದೇವೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ. ಅದಕ್ಕೆ ನಾವು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ಮುಸ್ಲಿಮರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವ ತೀರ್ಮಾನದ ಬಗ್ಗೆ ಕೇಳಿದಾಗ, “ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಜೊತೆಗೆ ರೈತರ ಮೇಲಿನ, ಕನ್ನಡ ಚಳುವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದು ಇದರಲ್ಲಿ ತಪ್ಪೇನಿಲ್ಲ” ಎಂದು ತಿಳಿಸಿದರು.

ರಾಷ್ಟ್ರದ ನಾಗರಿಕನಾಗಿರುವ ರಾಜ್ಯದ ಯಾವುದೇ ಪ್ರಜೆಗೆ ತನ್ನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಪ್ರಕ್ರಿಯೆಯಿಂದ ನಾಗರಿಕನ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನಗಳನ್ನು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್  ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಪಟ್ಟಿಗಳ ಮತದಾರರ ವಿಶೇಷ ತೀವು ಪರಿಷ್ಕರಣೆ (Special Intensive Revision – SIR) ಬಗ್ಗೆ ಸುಧೀರ್ಘ ಚರ್ಚೆಗಳು ನಡೆದವು. ಭಾರತದಲ್ಲಿ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಎಸ್ ಐ ಆರ್ ಪ್ರಕ್ರಿಯೆಯಿಂದ 27 ಲಕ್ಷ ಜನರ ಮತದ ಹಕ್ಕು ಕಸಿಯಲಾಯಿತು. ಎಸ್ ಐ ಆರ್ ನ ಅವಘಡಗಳು ಮತ್ತು ಗಂಭೀರ ಆಕ್ಷೇಪಗಳ ಬಗ್ಗೆ ಚರ್ಚಿಸಲಾಗಿ, ಈ ವಿಷಯದ ಬಗ್ಗೆ ಸರ್ವೋಚ್ಛ ನ್ಯಾಯಾಲಯದ ಮೆಟ್ಟೆಲೇರುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಅಂತಿಮ ಮತದಾರರ ಪಟ್ಟಿ , ಎಸ್ ಐ ಆರ್ ಪ್ರಕ್ರಿಯೆ, ಅದರ ಪಾರದರ್ಶಕತೆಗೆ ಸಂಬಂಧಿಸಿದ ಹಲವು ಅಂಶಗಳ ಬಗ್ಗೆ ಮತ್ತಷ್ಟು ವಿವರವಾದ ಚರ್ಚೆಗಳನ್ನು ನಡೆಯಬೇಕಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *