ಬೆಂಗಳೂರಿನ ಕೋರಮಂಗಲದಲ್ಲಿ ಶುಕ್ರವಾರ ರಾತ್ರಿ ನಡೆದ ನಡೆದ ಬಿಎಂಟಿಸಿ ಬಸ್ ಅಪಘಾತದಲ್ಲಿ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಯಶವಂತಪುರ ಸರ್ಕಲ್ನಲ್ಲಿ ಶನಿವಾರ ನಡೆದ ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಕೋರಮಂಗಲದ ನೆಕ್ಸಸ್ ಮಾಲ್ ಬಳಿ ಅಪಘಾತ ಸಂಭವಿಸಿದ್ದು, ಆಂಧ್ರಪ್ರದೇಶ ಮೂಲದ ಯುವಕ ಡೆಲಿವರಿ ಬಾಯ್ ಬೈಕ್ನಲ್ಲಿ ಹೋಗುತ್ತಿದ್ದಾಗ ಸಂಚರಿಸುತ್ತಿರುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಯುವಕನ ತಲೆ ಮತ್ತು ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಅಸು ನೀಗಿದ್ದಾನೆ.
ಯಶವಂತಪುರ ಸರ್ಕಲ್ ಬಳಿ ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಮಹಿಳೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಅಪಘಾತಕ್ಕೆ ನಿಖರ ಕಾರಣಪತ್ತೆ ಹಚ್ಚಬೇಕಿದೆ.
ಬಿಎಂಟಿಸಿ ಬಸ್ ಚಾಲಕರ ಅತಿ ವೇಗದ ಚಾಲನೆ ಮತ್ತು ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಅನೇಕ ಜೀವಗಳು ಹೋಗುತ್ತಿವೆ.


