Menu

ಚೀನಾದ ಕಲ್ಲಿದ್ದಲು ಗಣಿ ಸ್ಪೋಟಕ್ಕೆ 82 ಮಂದಿ ಬಲಿ

ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಜನರು ಮೃತಪಟ್ಟಿದ್ದಾರೆ. ಸ್ಫೋಟದ ವೇಲೆ 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ 201 ಜನರನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಗಣಿಯ ಆಳದಲ್ಲಿ ಸಿಲುಕಿರುವ ಉಳಿದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ , ಗಾಯಾಳುಗಳ ಚಿಕಿತ್ಸೆ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಯಾವುದೇ ಲೋಪ ಆಗಬಾರದೆಂದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ. ಅಪಘಾತದ ಸಮಗ್ರ ತನಿಖೆ ನಡೆಸಿ ಗಣಿ ಕಂಪನಿಯ ಪ್ರಮುಖ ಕಾರ್ಯನಿರ್ವಾಹಕರನ್ನು ಬಂಧಿಸಲಾಗಿದೆ.

ಚೀನಾದ ಒಟ್ಟು ರಾಷ್ಟ್ರೀಯ ಉತ್ಪಾದನೆಯ ಮೂರನೇ ಒಂದು ಭಾಗದಷ್ಟು ಕಲ್ಲಿದ್ದಲನ್ನು ಉತ್ಪಾದಿಸುವ ಅತ್ಯಂತ ಪ್ರಮುಖ ಗಣಿ ಇದಾಗಿದೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Related Posts

Leave a Reply

Your email address will not be published. Required fields are marked *