Menu

ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಓಟ ಮುಂದುವರಿಕೆ

ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಓಟ ಮುಂದುವರಿದಿದೆ, ಸೋಮವಾರ ಪೆಟ್ರೋಲ್ ದರ ಲೀಟರ್‌ಗೆ ರೂ.2.61 ಹಾಗೂ ಡೀಸೆಲ್ ದರ 2.71 ಏರಿಕೆಯಾಗಿದೆ. ಕಳೆದ 12 ದಿನಗಳಲ್ಲಿ  ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ. ಮೇ 15ರಿಂದ ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ರೂ 7.5ರಷ್ಟು ಹೆಚ್ಚಳವಾಗಿದೆ.

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ, ಆಹಾರ ವಸ್ತುಗಳ ಬೆಲೆ, ಕೈಗಾರಿಕಾ ಉತ್ಪಾದನಾ ವೆಚ್ಚ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ತತ್ತರಿಸಲಾರಂಭಿಸಿದೆ. ಹೊಸ ದರ ಪರಿಷ್ಕರಣೆಯ ನಂತರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ರೂ.102.12ಕ್ಕೆ ಏರಿಕೆಯಾದರೆ, ಡೀಸೆಲ್ ರೂ.95.20 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ರೂ.111.21 ಹಾಗೂ ಡೀಸೆಲ್ ರೂ.97.83 ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯೇ ಇದಕ್ಕೆ ಪ್ರಮುಖ ಕಾರಣವೆಂದು ತೈಲ ಕಂಪನಿಗಳು ಸಮರ್ಥಿಸುತ್ತಿವೆ. ಅಮೆರಿಕ ಮತ್ತು ಇಸ್ರೇಲ್ ದಾಳಿಗಳ ನಂತರ ಇರಾನ್ ಸುತ್ತ ಉದ್ವಿಗ್ನತೆ, ಯುದ್ಧ ಭೀತಿ, ಹರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಉಂಟಾದ ಅಡಚಣೆ ಕಚ್ಚಾ ತೈಲದ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಲಾಗುತ್ತಿದೆ. ರೂಪಾಯಿ ಮೌಲ್ಯ ಕುಸಿತದಿಂದ ಭಾರತವು ತೈಲ ಆಮದು ವೆಚ್ಚ ಹೆಚ್ಚಳದ ಬಿಸಿ ಅನುಭವಿಸುತ್ತಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ದೇಶದ 90 ಶೇಕಡ ಇಂಧನ ಮಾರುಕಟ್ಟೆಯನ್ನು ನಿಯಂತ್ರಿಸುತ್ತಿವೆ.  ಖಾಸಗಿ ಕಂಪನಿಗಳಾದ ನಯಾರಾ ಎನರ್ಜಿ, ಶೆಲ್ ಪಿಎಲ್‌ಸಿ ಮತ್ತು ಜಿಯೋ-ಬಿಪಿ ದರಗಳನ್ನು ಹೆಚ್ಚಿಸಿವೆ.

Related Posts

Leave a Reply

Your email address will not be published. Required fields are marked *