Wednesday, October 14, 2026
Menu

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಡಿಕೆ ಶಿವಕುಮಾರ್‌ಗೆ ಅಭಿನಂದಿಸಿದ ಸಿದ್ದರಾಮಯ್ಯ

ಇಂದು ನಡೆದ ಸಚಿವರ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಿಎಂ ಮಧ್ಯಾಹ್ನ ಮೂರು ಗಂಟೆಗೆ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ರಾಜ್ಯಪಾಲರು ಲಭ್ಯವಿಲ್ಲದಿದ್ದರೆ ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಖುದ್ದಾಗಿ ಡಿಕೆ ಶಿವಕುಮಾರ್ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ್ದಾರೆ. ಶಿವಕುಮಾರ್‌ ಅವರು ಸಿಎಂ ಕಾಲುಮುಟ್ಟಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಪ್ರಬಲವಾಗಿದೆ ಎಂಬ ಸಂದೇಶ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟವಾಗಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ.

ರಾಜ್ಯಪಾಲರು ಇಲ್ವಂತಲ್ಲ, ಹೋಗ್ತೀನಿ ನೋಡೋಣ ಎಂದು ಹೇಳುವ ಮೂಲಕ ತಮ್ಮ ನಿರ್ಧಾರ ಸ್ಪಷ್ಟವಾಗಿದೆ ಎಂದು ಸಿಎಂ ಸೂಚಿಸಿದರು. ರಾಜ್ಯಪಾಲರು ವೈಯಕ್ತಿಕ ಕಾರಣಗಳಿಂದ ಇಂದೋರ್‌ನಲ್ಲಿದ್ದು, ಇಂದು ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆಯಿದೆ.

Related Posts

Leave a Reply

Your email address will not be published. Required fields are marked *