Menu

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31ರಂದು ರೈಲು ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31 ಭಾನುವಾರ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸಂಚಾರ ವ್ಯತ್ಯಯವಾಗಲಿದೆ. ಅತ್ತಿಗುಪ್ಪೆ ಮತ್ತು ವಿಜಯನಗರ ನಡುವೆ ನಿರ್ವಹಣಾ ಕಾಮಗಾರಿ ಹಿನ್ನೆಲೆ ದೀಪಾಂಜಲಿನಗರ ಮತ್ತು ಕೆಎಸ್‌ಆರ್ ಮೆಜೆಸ್ಟಿಕ್ ನಿಲ್ದಾಣಗಳ ನಡುವೆ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಿಗ್ಗೆ 09:00 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳಲಿವೆ. ಬೆಳಿಗ್ಗೆ 7 ರಿಂದ 9 ಗಂಟೆಯವರೆಗಿನ ತಾತ್ಕಾಲಿಕ ವ್ಯತ್ಯಯದ ಅವಧಿಯಲ್ಲಿ ಚಲ್ಲಘಟ್ಟ – ಮೈಸೂರು ರಸ್ತೆ, ಕೆಂಪೇಗೌಡ (ಮೆಜೆಸ್ಟಿಕ್) – ವೈಟ್‌ಫೀಲ್ಡ್ (ಕಾಡುಗೋಡಿ), ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್ (ಹಸಿರು ಮಾರ್ಗ) ಆರ್.ವಿ. ರಸ್ತೆ – ಬೊಮ್ಮಸಂದ್ರ (ಹಳದಿ ಮಾರ್ಗ) ದಲ್ಲಿ ರೈಲು ಸಂಚಾರ ಎಂದಿನಂತೆ ಇರಲಿದೆ.

Related Posts

Leave a Reply

Your email address will not be published. Required fields are marked *