Menu

ರಾಜ್ಯಸಭೆಯ 4, ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ರಾಜ್ಯಸಭೆಯ ೪, ಪರಿಷತ್‌ನ ೭ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನ, ಜೂ.11 ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಇನ್ನೂ ಅಂತಿಮಗೊಳಿಸಿಲ್ಲ. ಇನ್ನೆರಡು ದಿನಗಳಲ್ಲಿ ಎರಡೂ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳುವ ಆಗುವ ಸಾಧ್ಯತೆ ಇದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಮೂರು, ಬಿಜೆಪಿ ಒಂದು ಗೆಲ್ಲುವ ಅವಕಾಶವಿದೆ. ಪರಿಷತ್ ಸ್ಥಾನಗಳಲ್ಲಿ ಕಾಂಗ್ರೆಸ್ ನಾಲ್ಕು, ಬಿಜೆಪಿ ಎರಡು ಸ್ಥಾನ ಗೆಲ್ಲುವ ಅವಕಾಶವಿದೆ. ಮತ್ತೊಂದು ಸ್ಥಾನಕ್ಕೂ ಕಾಂಗ್ರೆಸ್‌ ಅಭ್ಯರ್ಥಿ ಕಣಕ್ಕೆ ಇಳಿಸಿ ಗೆಲ್ಲಿಸಿಕೊಳ್ಳಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ.ನಾರಾಯಣ ಅವರ ಅವಧಿ ಜೂನ್ 25ರಂದು ಕೊನೆಗೊಳ್ಳಲಿದೆ.

ವಿಧಾನ ಪರಿಷತ್ತಿನಲ್ಲಿ ಜೆಡಿಎಸ್‌ನ ಗೋವಿಂದ ರಾಜು, ಕಾಂಗ್ರೆಸ್‌ನ ನಸೀರ್ ಅಹಮದ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಬಿಕೆ ಹರಿಪ್ರಸಾದ್, ಬಿಜೆಪಿಯ ಎಂಟಿಬಿ ನಾಗರಾಜು, ಪ್ರತಾಪ್ ಸಿಂಹ ನಾಯಕ್, ಸುನಿಲ್ ವಲ್ಯಾಪುರೆ ಅವರ ಅವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ.

Related Posts

Leave a Reply

Your email address will not be published. Required fields are marked *